ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶಿವಣ್ಣ ಕೋಟೆ ಅವರು ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವೇಳೆ ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ, ನೀಡಲಾಗುತ್ತಿರುವ ಸೌಲಭ್ಯಗಳನ್ನು ಹಾಗೂ ಪೌರಕಾರ್ಮಿಕರ ಒಟ್ಟು ವಿವರ ಹಾಗೂ ಖಾಲಿ ಇರುವ ಹುದ್ದೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಪೌರ ಕಾರ್ಮಿಕರು ಹಾಗೂ ಅಧಿಕಾರಿಗಳಿಗೂ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಶಂಶುನ್ನಿಸಾ ರವರು ನಗರಸಭಾ ಸದಸ್ಯರಾದ ಜಬೀವುಲ್ಲಾರವರು ಮೊದಲ ಮೇರಿ ತಹಸಿಲ್ದಾರರಾದ ಶಿವಕುಮಾರ್ ರವರು ಆಯುಕ್ತರಾದ ಡಿ.ಉಮೇಶ್ ರವರು ಹಾಗೂ ಜಿಲ್ಲೆಯ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy