ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಖ್ಯಾತ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಹಾಗೂ ಭೀಮನ ಅಮಾವಾಸ್ಯೆ ಪ್ರಯುಕ್ತ ತಾಯಿ ದುರ್ಗಾ ಪರಮೇಶ್ವರಿ ದೇವಿಗೆ ಭಕ್ತಾದಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ದೇವಿಗೆ ಹೂವಿನ ಅಲಂಕಾರ , ಪುಷ್ಪಾರ್ಚನೆ ನೆರವೇರಿಸಲ್ಪಟ್ಟಿತ್ತು . ವಿಶೇಷ ಪೂಜೆ ಬಗ್ಗೆ ಮಾಧ್ಯಮದ ಪ್ರತಿನಿಧಿಯೊಂದಿಗೆ ಮಾತನಾಡಿದ ದುರ್ಗಾ ಪರಮೇಶ್ವರಿ ದೇವಸ್ಥಾನ ಅರ್ಚಕರಾದ ಕೃಷ್ಷ ಅವರು, ದೇವಿಯ ವೈಶಿಷ್ಟ್ಯತೆ ಹಾಗೂ ಮಹತ್ವಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಭಕ್ತಾದಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು . ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕೃಷ್ಣ, ರವಿ ಸೇರಿದಂತೆ ಅನೇಕ ಭಕ್ತಾದಿಗಳು ಸಹ ಧೇವಿ ದುರ್ಗಾ ಪರಮೇಶ್ವರಿ ದೇವಿಯ ಪೂಜೆಯಲ್ಲಿ ಭಾಗವಹಿಸಿದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz