ಹಿರಿಯೂರು: ನಗರದ ಗಾಂಧಿ ಸರ್ಕಲ್ ಬಳಿಯ ನೆಹರು ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನೂ ಒದಗಿಸದೇ ಹಿರಿಯೂರು ನಗರಸಭೆ ನಿರ್ಲಕ್ಷ್ಯವಹಿಸಿದೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾರುಕಟ್ಟೆಯನ್ನು ನಿರ್ವಹಿಸುವಲ್ಲಿ ಹಿರಿಯೂರು ನಗರ ಸಭೆ ವಿಫಲವಾಗಿದ್ದು, ನಗರದಲ್ಲಿ ಮಳೆ ಸುರಿದರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ನಿಂತುಕೊಳ್ಳಲು ಕೂಡ ಯಾವುದೇ ವ್ಯವಸ್ಥೆಗಳಿಲ್ಲ. ನಗರಸಭೆಗೆ ವ್ಯಾಪಾರಿಗಳು ಬಾಡಿಗೆ ಪಾವತಿ ಮಾಡುತ್ತಿದ್ದರೂ, ಕನಿಷ್ಠ ಮೂಲಭೂತ ಸೌಲಭ್ಯ ಒದಗಿಸದೇ ನಿರ್ಲಕ್ಷ್ಯವಹಿಸಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ.
ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಸ್ಥರ ಪಾಡು ಹೇಳ ತೀರದಂತಾಗಿದೆ. ಮಳೆ ಸುರಿದರೆ, ಮಾರುಕಟ್ಟೆಯ ದುಸ್ಥಿತಿ ನೋಡಲಾಗದೇ ಸಾರ್ವಜನಿಕರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಕಂಡೂ ಕಾಣದಂತಿರುವ ನಗರಸಭೆ ಇನ್ನಾದರೂ ಎಚ್ಚೆತ್ತುಕೊಂಡು, ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇನ್ನೂ ನೆಹರು ಮಾರುಕಟ್ಟೆ ದುಸ್ಥಿತಿಯ ಕುರಿತು ಜನಪ್ರತಿನಿಧಿಗಳು ಮೌನವಾಗಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ತಕ್ಷಣವೇ ಜನ ಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಸಾರ್ವಜನಿಕರಿಗೆ ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


