ಹಿರಿಯೂರು: ಅಂಬೇಡ್ಕರ್ ಸಂಘಟನೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಹಿರಿಯೂರು ತಾಲ್ಲೂಕಿನಲ್ಲಿ ವಿಜೃಂಭಣೆಯಿಂದ ನಡೆಯಿತು.
ತಾಲ್ಲೂಕಿನ ಟಿ.ಬಿ.ಸರ್ಕಲ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಸಲ್ಲಿಸಿ ಟಿ.ಬಿ. ಸರ್ಕಲ್ ವೃತ್ತದಿಂದ ಹಿರಿಯೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸುವ ಮೂಲಕ ವಿಶೇಷ ಗೌರವ ನೀಡಲಾಯಿತು. ಈ ವೇಳೆ ಯುವ ಸಮೂಹ ಕುಣಿದು, ಜೈಕಾರ ಹಾಕುತ್ತಾ ಸಂಭ್ರಮಿಸಿತು.
ಈ ವೇಳೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಹಿರಿಯೂರು ತಾಲ್ಲೂಕಿನ ರಂಗನಾಥಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗನಾಥಪುರ ಗ್ರಾಮದ ಉಪಾಧ್ಯಕ್ಷರಾದ ಮಂಜುನಾಥ್, ಅಂಬೇಡ್ಕರ್ ರವರು ಹೆಸರಿಗೆ ಮಾತ್ರ ಸೀಮಿತವಾದ ವ್ಯಕ್ತಿಯಲ್ಲ, ಅವರ ಹೆಸರಿನಲ್ಲಿಯೇ ಒಂದು ಮಹತ್ವವಾದ ಶಕ್ತಿ ಇದೆ. ಅಂಬೇಡ್ಕರ್ ರವರು ರಚಿಸಿದಂತಹ ಸಂವಿಧಾನವು ಕೇವಲ ಎಸ್ ಸಿ, ಎಸ್ ಟಿ ಮಾತ್ರ ಸೀಮಿತವಾಗಿಲ್ಲ ಪ್ರತಿಯೊಬ್ಬ ವ್ಯಕ್ತಿಯೂ ಸಹ ಇಂದು ಶಿಕ್ಷಣ ಪಡೆಯಲು ಕಾರಣವೇ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಎಂದು ತಿಳಿಸಿದರು.
ದಲಿತ ಸಂಘಟನೆಯ ರಮೇಶ್ ಕುಮಾರ್ ಮಾತನಾಡಿದರು. ಈ ಸಂಧರ್ಭದಲ್ಲಿ ದಲಿತ ಸಮುದಾಯದ ಎಲ್ಲಾ ಸಂಘಟನೆ ಕಾರ್ಯಕರ್ತರು, ಮುಖಂಡರು ಹಾಗೂ ಅಂಬೇಡ್ಕರ್ ರವರ ಅಭಿಮಾನಿಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


