ಹಿರಿಯೂರು: ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಎ.ಡಿ.ಎಮ್ ಶಿರಸ್ಥೆದಾರರಾದ ತಿಪ್ಪೇಸ್ವಾಮಿ ಹಾಗೂ ರಾಜು ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಎ.ಡಿ.ಎಮ್. ಶಿರಸ್ಥೆದಾರ ತಿಪ್ಪೇಸ್ವಾಮಿ, ಇಂದು ನಮ್ಮ ಭಾರತ ದೇಶ ಕಂಡಂತಹ ಮಹಾನ್ ವ್ಯಕ್ತಿಗಳಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 118 ನೇ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಕಛೇರಿ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ಹಾಗೂ ಪ್ರತಿಯೊಬ್ಬ ಭಾರತೀಯರು ಆಚರಿಸುತ್ತಿರುವುದು ನಿಜಕ್ಕೂ ಸಹ ಹೆಮ್ಮೆಯ ವಿಷಯವಾಗಿದೆ ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರ ಕ್ಕೆ ಪುಷ್ಪಾಮಾಲೆಗಳನ್ನು ಸಲ್ಲಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


