ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಅಂತಿಮ ದರ್ಶನ ಪಡೆದ ಡಿ.ಕೆ.ಶಿವಕುಮಾರ್, ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣ ಅವರ ಕಾಲಿಗೆ ನಮಸ್ಕರಿಸಿ ಕಂಬನಿ ಮಿಡಿದರು.
ಎಸ್.ಎಂ.ಕೃಷ್ಣ ಅವರ ಅಗಲಿಕೆಯಿಂದ ತೀವ್ರ ದುಃಖಿತರಾಗಿದ್ದ ಡಿಕೆಶಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯ ಕಂಡು ಬಂತು.
ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಸಲಿದೆ ಎಂದು ಆದೇಶ ಹೊರಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx