ಬೆಂಗಳೂರು: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ವೈರಸ್ ಹ್ಯೂಮನ್ ಮೆಟಾನ್ಯೂಮೊ ವೈರಸ್( HMPV) ಬೆಂಗಳೂರಿನಲ್ಲಿ ಮಗುವಿನಲ್ಲಿ ಪತ್ತೆಯಾಗಿದೆ.
ನಗರದ ಖಾಸಗಿ ಆಸ್ಪತ್ರೆಗೆ 8 ತಿಂಗಳ ಮಗುವನ್ನು ಜ್ವರದ ಹಿನ್ನೆಲೆ ದಾಖಲಿಸಲಾಗಿತ್ತು. ಪರೀಕ್ಷೆ ಮಾಡಿಸಿದ ವೇಳೆ HMPV ಪತ್ತೆಯಾಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ ಎಂದು ಅವರು ತಿಳಿಸಿದ್ದಾರೆ.
ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx