ಹೊಳೆನರಸೀಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಬೆಂಗಳೂರು) ಇದರ ವತಿಯಿಂದ ಹೊಳೆನರಸೀಪುರ ತಾಲ್ಲೂಕು ಪ್ರಾಥಮಿಕ ಶಾಲಾ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎನ್. ಭೋಗೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಎಸ್.ಕೆ. ಮಲ್ಲರಾಜೇಗೌಡ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರನ್ನು ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯಲ್ಲಿ ವಿಶೇಷವಾಗಿ ಸನ್ಮಾನಿಸಿ, ಹಾರೈಕೆಗಳನ್ನು ಕೋರಲಾಯಿತು.
ಈ ಸನ್ಮಾನ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
