ದಾವಣಗೆರೆ: ಜಿಲ್ಲೆಯಾದ್ಯಂತ ಬಣ್ಣದೋಕುಳಿ ಸಂಭ್ರಮ, ಸಡಗರ ಮನೆ ಮಾಡಿತ್ತು. ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಯುವಕ, ಯುವತಿಯರು, ಮಹಿಳೆಯರು ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು.
ಬಣ್ಣ ಎರಚಿಕೊಳ್ಳುತ್ತಾ ಡಿಜೆ ಸೌಂಡ್ಗೆ ಸಖತ್ತಾಗಿಯೇ ಸ್ಟೆಪ್ ಹಾಕಿದ ಜನರು ಬಣ್ಣದ ಲೋಕದಲ್ಲಿ ಮಿಂದೆದಿದ್ದರು. ಬಣ್ಣ ಬಣ್ಣದ ವೇಷ ತೊಟ್ಟವರ ಬಟ್ಟೆಗಳೆಲ್ಲವೂ ಬಣ್ಣಗಳಿಂದ ಕಂಗೊಳಿಸುತ್ತಿದ್ದವು. ಇನ್ನು ಬಣ್ಣದಲ್ಲಿ ಮಿಂದೆದ್ದ ಯುವಸಮೂಹ ಡಿಜೆ ಸೌಂಡ್ಗೆ ಸಖತ್ ಸ್ಟೆಪ್ ಹಾಕಿದರು.
ಚಿಣ್ಣರ ಸಂಭ್ರಮವೂ ಕೂಡ ವಿಶೇಷವಾಗಿ ಗಮನ ಸೆಳೆಯಿತು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಕಾಲೇಜು ಯುವಕ, ಯುವತಿಯರ ಡ್ಯಾನ್ಸ್ ಮತ್ತಷ್ಟು ಕಳೆಗಟ್ಟುವಂತೆ ಮಾಡಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


