ಚಾಮರಾನಗರ: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಹಿನ್ನೆಲೆ ಏಪ್ರಿಲ್ 30ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.
ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ. ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್.ಬಿ ಈ ಆದೇಶ ಹೊರಡಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 30 ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಸಕಲ ಗೌರವಗಳೊಂದಿಗೆ ವಿ.ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296