ಛತ್ತೀಸ್ ಗಢದಲ್ಲಿ ಮನೆಗೆ ನುಗ್ಗಿದ ಕಳ್ಳನೊಬ್ಬ ಬೆಡ್ ರೂಮ್ ನಲ್ಲಿ ಮಲಗಿದ್ದ ದಂಪತಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳ್ಳತನದ ಉದ್ದೇಶದಿಂದ ಯುವಕ ಮನೆಗೆ ಎಂಟ್ರಿ ನೀಡಿದ್ದ. ಆದರೆ ಬೆಡ್ ರೂಮ್ ನಲ್ಲಿ ದಂಪತಿ ನೋಡಬಾರದ ಸ್ಥಿತಿಯಲ್ಲಿ ಪತ್ತೆಯಾದಾಗ ವಿಡಿಯೋ ಮಾಡಿಕೊಂಡು ಸ್ಥಳದಿಂದ ತೆರಳಿದ್ದ. ಬಳಿಕ ಮನೆಯ ಯಜಮಾನನ ವಾಟ್ಸಾಪ್ ನಂಬರ್ ಸಂಗ್ರಹಿಸಿ, ಫೋಟೊ, ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ವಿಡಿಯೋ ವೈರಲ್ ಮಾಡದಿರಲು 10 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾನೆ.
ಬ್ಲ್ಯಾಕ್ ಮೇಲ್ ನಿಂದ ಕಂಗಾಲಾದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ವಿನಯ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಆರೋಪಿ ನಿಜ ವಿಷಯ ಬಾಯ್ಬಿಟ್ಟಿದ್ದಾನೆ.
ಆರೋಪಿಯು ಸಿವಿಲ್ ಪರೀಕ್ಷೆ ಬರೆದಿದ್ದರೂ ಪಾಸ್ ಆಗಿರಲಿಲ್ಲ, ಹೀಗಾಗಿ ಕಳ್ಳತನಕ್ಕೆ ಇಳಿದಿದ್ದ. ಕಳ್ಳತನಕ್ಕೆ ಎಂದು ಮನೆಗೆ ನುಗ್ಗಿದ ವೇಳೆ ದಂಪತಿ ಖಾಸಗಿ ಕ್ಷಣದಲ್ಲಿ ಮೈಮರೆತಿದ್ದರು. ಈ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದ ಆರೋಪಿ ನಂತರ ಬ್ಲ್ಯಾಕ್ ಮೇಲ್ ಮಾಡಿ ಹಣ ಗಳಿಸಲು ಮುಂದಾಗಿದ್ದಾನೆ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA