ಬೆಂಗಳೂರು: ಲಂಚಕ್ಕೆ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಗೃಹಸಚಿವಾಲಯದ ಹೋಮ್ಗಾರ್ಡ್ನನ್ನು ಲಂಚದ ಹಣದ ಸಹಿತ ನಗರದ ಖಾಸಗಿ ಹೋಟೆಲ್ನಲ್ಲಿ ಬಂಧಿಸಿದ್ದಾರೆ.
ನಿವೃತ್ತ ಪೊಲೀಸ್ ಅಧಿಕಾರಿ ವೈದ್ಯಕೀಯ ವೆಚ್ಚದ ಬಿಲ್ ಗಾಗಿ ಲಂಚ ಪಡೆಯುತ್ತಿದ್ದ ಹೋಮ್ ಗಾರ್ಡ್ ಸತೀಶ್ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ವೈದ್ಯಕೀಯ ವೆಚ್ಚದ ಬಿಲ್ ಗಾಗಿ ಸಂಬಂಧಪಟ್ಟವರಿಂದ ಮರುಪಾವತಿಸಲು ಕ್ರಮಕೈಗೊಳ್ಳಲು ಲಂಚಕ್ಕೆ ಬೇಡಿಕೆ ಇಡಲಾಗಿದೆ.
ಸಂಬಂಧಪಟ್ಟವರನ್ನು ಹಣ ತರುವಂತೆ ಖಾಸಗಿ ಹೊಟೇಲ್ಗೆ ಆಹ್ವಾನಿಸಲಾಗಿದೆ. ಈ ವೇಳೆ ಸತೀಶ್ ಅವರು ಲಂಚವಾಗಿ 20,000 ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


