ಕೊರಟಗೆರೆ : ಇತ್ತೀಚಿಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ತಾಲೂಕು ಸಂಘದ ಪದಾಧಿಕಾರಿಗಳಿಗೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ತಿಳಿಸಿದರು.
ತುಮಕೂರಿನ ಪ್ರವಾಸಿ ಮಂದಿರದಲ್ಲಿ ಕೊರಟಗೆರೆ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು, ಸೇರಿದಂತೆ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿ ಮಾಡಿ ಸಚಿವರಿಗೆ ಪದಾಧಿಕಾರಿಗಳಿಂದ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ನೂತನವಾಗಿ ಆಯ್ಕೆಯಾದ ಪತ್ರಕರ್ತ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನ ತಿಳಿಸಿದರು.
ಇದೇ ವೇಳೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ್ ನಾರಾಯಣ್, ಮಹೇಶ್, ಟೈಗರ್ ನಾಗ್, ರಘುವೀರ್, ಕೆ.ಎಲ್.ಎಂ ಮಂಜು, ನಿಕಟ ಪೂರ್ವ ಅಧ್ಯಕ್ಷ ಹಾಗೂ ಜಿಲ್ಲಾ ನಿರ್ದೇಶಕ ಕೆ.ವಿ.ಪುರುಷೋತ್ತಮ್, ರಂಗಧಾಮಯ್ಯ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಕೆ.ನರಸಿಂಹಮೂರ್ತಿ ಉಪಾಧ್ಯಕ್ಷರಾದ ನಾಗರಾಜು, ತಿಮ್ಮರಾಜು, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ನವೀನ್‌ಕುಮಾರ್, ಕಾರ್ಯದರ್ಶಿಗಳಾದ ಲಕ್ಷ್ಮೀಶ, ಲಕ್ಷ್ಮಿಕಾಂತ, ಪತ್ರಕರ್ತರಾದ ಹರೀಶ್‌ಬಾಬು, ವಿಜಯಶಂಕರ್, ಮಂಜುನಾಥ್, ಮಂಜುಸ್ವಾಮಿ ಎಂ ಎನ್ ಸತೀಶ್, ರಮೇಶ್, ದೇವರಾಜು ಕೆ ಎನ್ , ಮುತ್ತುರಾಜು, ನರಸಿಂಹಮೂರ್ತಿ, ಬಾಬುನಾಯ್ಕ್, ಸೇರಿದಂತೆ ಇತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


