ಕೊರಟಗೆರೆ: ತಾಲ್ಲೂಕಿನ ಚನ್ನರಾಯಣದುರ್ಗ ಹೋಬಳಿಯ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆ ಹೊನ್ನೂರು ಖಾಸಾ ಶಾಖಾ ಮಠಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಿ, 228 ನೇ ಬೆಳದಿಂಗಳ ಕೂಟ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಶ್ರೀ ಸಿದ್ದೇಶ್ವರ ಸ್ವಾಮಿಗೆ ಡಾ.ಜಿ ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರಾದ ಅರಕೆರೆ ಶಂಕರ್ ಮತ್ತು ಗೊಂದಿಹಳ್ಳಿ ರಂಗರಾಜು ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದೇ ವೇಳೆ ಪರಮೇಶ್ವರ್ ಅವರಿಗೆ ಶೀಘ್ರವೇ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರಕಲೆಂದು ಕ್ಷೇತ್ರಾಧಿಪತಿ ಶ್ರೀ ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥನೆ ಮಾಡಿದರು.
ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಪರಮೇಶ್ವರ್ ರಾಜ್ಯ ಮುಖ್ಯಮಂತ್ರಿಯಾಗಲಿ ಎಂದು ಜೈಕಾರ ಹಾಕಿದರು. ನಂತರ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಗೃಹ ಸಚಿವರು ಸಮಾಲೋಚನೆ ನಡೆಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


