ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಧ್ವಜಾರೋಹಣ ನೆರವೇರಿಸಿದರು.
ಮಠದಲ್ಲಿ ವ್ಯಾಸಂಗ ಮಾಡುತ್ತಿರುವ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಿದ್ದಗಂಗಾ ಮಠದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗಸ್ವಾಮೀಜಿ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್ ಮೂರ್ತಿ, ಜಿಲ್ಲಾವರಿಷ್ಟಾಧಿಕಾರಿ ರಾಹುಲ್ ಕುಮಾರ್ ಭಾಗಿಯಾಗಿದ್ದಾರೆ.