ಬೆಂಗಳೂರು: ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪೊಲೀಸರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು, ನಾಗರಿಕರು ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.
ಈ ವರ್ಷ ಪೊಲೀಸ್ ಇಲಾಖೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು ಮತ್ತು ಯುವ ಪೀಳಿಗೆ ಕೂಡ ಶಾಂತಿಯುತವಾಗಿ ಹೊಸ ವರ್ಷಾಚರಣೆ ಮಾಡಿತು. ಇದಕ್ಕಾಗಿ ಅವರಿಗೆ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅನೇಕ ನಗರಗಳಲ್ಲಿ ಪಟಾಕಿ ಸಿಡಿಸಿ ಜನರು ಸಂಭ್ರಮಿಸಿದರು. ಮುಂಬೈನಲ್ಲಿ ಜುಹು ಬೀಚ್, ಚೌಪಾಟಿ ಬೀಚ್ ಮತ್ತು ವರ್ಸೋವಾ ಬೀಚ್ಗಳಲ್ಲಿ ಜನರು ಜಮಾಯಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx