ತಮಿಳುನಾಡು : ಹೋಂ ವರ್ಕ್ ಒತ್ತಡ ಹೆಚ್ಚಾಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವರುರ್ ಜಿಲ್ಲೆಯ ಪೆರಲಂನಲ್ಲಿ ಘಟನೆ ನಡೆದಿದೆ.
14 ವರ್ಷದ ಸಂಜಯ್ ಮೃತ ವಿದ್ಯಾರ್ಥಿಯಾಗಿದ್ದಾನೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೋಮ್ ವರ್ಕ್ ಕಾರಣಕ್ಕೆ ಸಾಕಾಗಿ ಹೋಗಿದ್ದ ಎನ್ನಲಾಗಿದೆ. ಹೀಗಾಗಿ ಶಾಲೆಯನ್ನು ಬದಲಿಸುವಂತೆ ತನ್ನ ಪೋಷಕರಿಗೆ ಪದೇ ಪದೇ ಹೇಳುತ್ತಿದ್ದ ಎಂದು ತಿಳಿದುಬಂದಿದೆ.
ತನ್ನ ಪೋಷಕರು ಶಾಲೆ ಬದಲಿಸಲು ನಿರಾಕರಿಸಿದಾಗ ಇನ್ನಷ್ಟು ಒತ್ತಡಕ್ಕೊಳಗಾದ ಸಂಜಯ್ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆತನನ್ನು ತಿರುವುರ್ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy