nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊನಕೆರೆ ನಂಜುಂಡೇಗೌಡರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
    ರಾಜ್ಯ ಸುದ್ದಿ October 29, 2023

    ಹೊನಕೆರೆ ನಂಜುಂಡೇಗೌಡರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

    By adminOctober 29, 2023No Comments2 Mins Read
    bengaluru 2

    ಬೆಂಗಳೂರು: ಮಾಧ್ಯಮಗಳಲ್ಲಿ ಗರ್ವದಿಂದ ಏನೇ ಚರ್ಚೆಗಳಾದರೂ ವಾಕ್ ಸ್ವಾತಂತ್ರ್ಯ ಇಂದು ಅಪಾಯದಲ್ಲಿದೆ. ದೊಡ್ಡ ಜಾತಿ, ಶ್ರೀಮಂತ ವ್ಯಕ್ತಿಗಳು, ಕೈಗಾರಿಕಾ ವಲಯಗಳ ವಿರುದ್ಧ ಬರೆಯಲು ಮಾಧ್ಯಮಗಳಿಗೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

    ನಗರದ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಹೊನಕೆರೆ ನಂಜುಂಡೇಗೌಡ ಅವರಿಗೆ 2023ನೇ ಸಾಲಿನ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಅವರು, ಮಾಧ್ಯಮಗಳು ಇಂದು ರಾಜಕೀಯ ಶಕ್ತಿ ಕೇಂದ್ರದಲ್ಲಿರುವವರ ವಿರುದ್ಧ ಬರೆಯುವುದನ್ನು ಕಡಿಮೆ ಮಾಡಿವೆ. ಮಾಲೀಕರಿಂದ ಮಾಧ್ಯಮ ಮಿತ್ರರಿಗೆ ಲಗಾಮು ಬಿದ್ದಿದ್ದು, ತನ್ನ ತನವನ್ನು ಪತ್ರಿಕೋದ್ಯಮ ಮಂದಿ ಕಳೆದುಕೊಂಡಿದ್ದಾರೆ. ಇಷ್ಟೊಂದು ಗಂಭೀರ ಸನ್ನಿವೇಶ ಇದ್ದರೂ ಸಹ ವಾಕ್ ಸ್ವಾತಂತ್ರ್ಯದ ಬಗ್ಗೆ ಪತ್ರಿಕೋದ್ಯಮಿಗಳ ಧ್ವನಿಯೇ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.


    Provided by
    Provided by

    ನಮ್ಮ ದೇಶದಲ್ಲಿ ಶೇ 50 ರಷ್ಟು ಮಾತ್ರ ವಾಕ್ ಸ್ವಾತಂತ್ರ್ಯ ಉಳಿದಿದ್ದು, ಇದರ ಅನುಭವ ಪ್ರತಿಯೊಬ್ಬರಿಗೂ ಆಗುತ್ತಿದೆ. ಇವೆಲ್ಲವೂ ಗೊತ್ತಿದ್ದರೂ ಸಹ ನಾವೆಲ್ಲರೂ ಮೌನಕ್ಕೆ ಶರಣಾಗಿದ್ದೇವೆ. ಇಂತಹ ಪರಿಸ್ಥಿತಿಯನ್ನು ಗ್ರಹಿಸಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸನ್ನಿವೇಶ ಎದುರಾಗಿದೆ. ಹಿಂದೆ ಪತ್ರಿಕೋದ್ಯಮ ಹೇಗಿತ್ತು. ಈಗ ಹೇಗಿದೆ ಎಂದು ವಿಶ್ಲೇಷಣೆಯನ್ನು ಸದಾ ಮಾಡುತ್ತಿರುತ್ತೇನೆ. ಹಿಂದೆ ಪತ್ರಿಕಾಗೋಷ್ಠಿಗಳಿಗೆ ಬರಬೇಕಾಗಿದ್ದರೆ ತಲೆ ಕೆರೆದುಕೊಂಡು ಬರುತ್ತಿದ್ದೇವು. ಇಂದು  ತಲೆ ಬಾಚಿಕೊಂಡು ಧೈರ್ಯದಿಂದ ಬರುತ್ತಿದ್ದೇವೆ. ತಲೆ ಬಾಚಿಕೊಂಡರೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಚೆನ್ನಾಗಿ ಕಾಣುತ್ತೇವೆ. ಹಿಂದಿನ ಮತ್ತು ಈಗಿನ ಸನ್ನಿವೇಶವನ್ನು ನಾವು  ಓರೆಗೆ ಹಚ್ಚಬೇಕಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

    ವರ್ಷದ 365 ದಿನಗಳಲ್ಲಿ 100 ದಿನಗಳ ಕಾಲ ಒಬ್ಬರನ್ನೊಬ್ಬರು ದೂಷಣೆ ಮಾಡುವುದನ್ನು ವೃತ್ತ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿ ಮಾಡಲಾಗುತ್ತಿದೆ. ವಿಚಿತ್ರವೆಂದರೆ ಇಲ್ಲಿ ಇಬ್ಬರೂ ಹೇಳುತ್ತಿರುವುದು ಕೂಡ ಸುಳ್ಳು ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ವಿದ್ಯುನ್ಮಾನ ಮಾಧ್ಯಮಗಳ ಪರಿಸ್ಥಿತಿ ಇನ್ನೂ ಶೋಚನೀಯವಾಗಿದೆ. ಇಂತಹ ಕಾಲಘಟ್ಟದಲ್ಲಿ ಖಾದ್ರಿ ಶಾಮಣ್ಣ ಟ್ರಸ್ಟ್ ಮೂಲಕ ಮಾಧ್ಯಮ ಸ್ವಾತಂತ್ರ್ಯದ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಹತ್ತು ಮಂದಿ ಹಿರಿಯ ಪತ್ರಕರ್ತರು ಮುಂದೆ ನಿಂತು ವಾಕ್ ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿ ಹಿಡಿಯಲು ನಿಲ್ಲದಿದ್ದರೆ ನಾವೆಲ್ಲರೂ ಕರ್ತವ್ಯ ಲೋಪ ಮಾಡಿಕೊಂಡಂತಾಗುತ್ತದೆದೆ ಎಂದು ಕಿವಿ ಮಾತು ಹೇಳಿದರು.

    ಪ್ರಶಸ್ತಿಗಾಗಿ ಅರ್ಜಿಕರೆಯದೇ ಇರುವುದು ಒಳ್ಳೆಯ ಬೆಳವಣಿಗೆ. ಇಲ್ಲವಾಗಿದ್ದಲ್ಲಿ ನನ್ನನ್ನು ಒಳಗೊಂಡಂತೆ ರಾಜಕಾರಣಿಗಳು ಮತ್ತಿತರಿಂದ ನಿಮಗೆ ಶಿಫಾರಸ್ಸುಗಳ ಮಹಾಪೂರವೇ ಹರಿದು ಬರುತ್ತಿತ್ತು. ರಾಜ್ಯೋತ್ಸವ ಪ್ರಶಸ್ತಿಗಾಗಿ ಸರ್ಕಾರಕ್ಕೆ 27 ಸಾವಿರ ಅರ್ಜಿಗಳು ಬಂದಿವೆ. ಹೀಗಿರುವಾಗ ಅರ್ಹರನ್ನು ಹೇಗೆ ಆಯ್ಕೆ ಮಾಡುವುದು ಎಂಬ ಆತಂಕ ಎದುರಾಗಿದೆ. ಆದರೆ ಪ್ರಶಸ್ತಿಗಾಗಿ ಟ್ರಸ್ಟ್ ಆಯ್ಕೆಯನ್ನು ಇಡೀ ಕರ್ನಾಟಕ ಒಪ್ಪುತ್ತದೆ ಎಂದು ಎಚ್.ಕೆ. ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

    ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕ ಎಸ್. ನಾಗಣ್ಣ ಮಾತನಾಡಿ, ಪತ್ರಿಕೆಗಳನ್ನು ಓದದೇ ಇರುವವರು ಪತ್ರಿಕೆಗಳಿಗೆ ವರದಿ ಮಾಡುವ ದುರಂತದ ಸನ್ನಿವೇಶದಲ್ಲಿ ನಾವಿದ್ದೇವೆ. ಇಂತಹ ಮಾಧ್ಯಮ ಪ್ರತಿನಿಧಿಗಳಿಂದ ಏನನ್ನು ನಿರೀಕ್ಷಿಸಲು ಸಾಧ್ಯ. ಮಾಧ್ಯಮ ಇಂದು ವ್ಯಾಪಕ ಬದಲಾವಣೆ ಕಾಣುತ್ತಿದ್ದರೂ ಯೂಟ್ಯೂಬ್, ಡಿಜಿಟಲ್ ಮೀಡಿಯಾ ವಲಯ ಮಾಧ್ಯಮ ಕ್ಷೇತ್ರವನ್ನು ಕಲುಷಿತಗೊಳಿಸುತ್ತಿದೆ. ಪ್ರತಿಯೊಂದು ಕಾರ್ಯಕ್ರಮದಲ್ಲಿ 500 ರಿಂದ 1000 ರೂಪಾಯಿ ದೈನಂದಿನ ವಸೂಲಿ ಇವರ ಆದ್ಯತೆಯಾಗಿದ್ದು, ಮಾಧ್ಯಮ ಕ್ಷೇತ್ರ ಎಲ್ಲಿಗೆ ತಲುಪಲಿದೆ ಎಂಬ ಆತಂಕವಿದೆ ಎಂದು ಹೇಳಿದರು.

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.