ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜಣ್ಣ, ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲಿಖಿತ ಮನವಿ ನೀಡಿದರು.
ಬಳಿಕ ರಾಜಣ್ಣ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪರಮೇಶ್ವರ ಅವರು, ಈ ವಿಚಾರದಲ್ಲಿ ನಾನು ದೂರು ಸ್ವೀಕರಿಸಲು ಸಾಧ್ಯವಿಲ್ಲ. ಪೊಲೀಸ್ ಠಾಣೆಯಲ್ಲೇ ದೂರು ಸಲ್ಲಿಸಬೇಕು. ನಾನು ಮನವಿ ಮಾತ್ರ ಸ್ವೀಕರಿಸಿದ್ದೇನೆ. ಈ ಮನವಿ ಆಧಾರದ ಮೇಲೆ ಕಾನೂನು ತಜ್ಞರ ಜೊತೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4