ಬೆಂಗಳೂರು: ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ; ಎಸ್ ಐಟಿಯಿಂದ ಇದು ಖಂಡಿತ ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಪಕ್ಷಾತೀತವಾಗಿ ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48–49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.
ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4