ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಚಿವ ಕೆ.ಎನ್ ರಾಜಣ್ಣ ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ ಎಂದರು.
ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4