ಬೆಂಗಳೂರು: ಹನಿಟ್ರ‍್ಯಾಪ್ ವಿಚಾರ ಸದನದಲ್ಲಿ ಪ್ರಸ್ತಾಪ ಮಾಡಿರುವುದು ಸಾರ್ವಜನಿಕರ ಮುಂದೆ ತಲೆ ತಗ್ಗಿಸುವ ವಿಚಾರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಹನಿಟ್ರ‍್ಯಾಪ್ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹ ಸಚಿವರಿಗೆ ರಾಜಣ್ಣ ಮನವಿ ಕೊಟ್ಟಿದ್ದಾರೆ. ಉನ್ನತ ಮಟ್ಟದ ತನಿಖೆ ಆಗಬೇಕು ಅಂದಿದ್ದಾರೆ. ಇದಕ್ಕೆ ಸರ್ಕಾರ ಕೂಡ ಸಿದ್ಧ ಇದೆ ಎಂದರು.
ಅನೇಕರದ್ದು ಸಿಡಿ ಇದೆ ಎಂದು ಹೇಳಿದ್ದಾರೆ. ಅಂದರೆ ಸಿಎಂ, ಡಿಸಿಎಂ, ಸ್ಪೀಕರ್ ಅವರ ಸಿಡಿ ಇದೆ ಅಂತಾನಾ? ಇದು ನಿಜಕ್ಕೂ ತಲೆ ತಗ್ಗಿಸುವ ವಿಚಾರ. ನಾವು ಕುಟುಂಬಗಳಿಗೆ, ಸ್ನೇಹಿತರಿಗೆ ಹೇಗೆ ಮುಖ ತೋರಿಸುವುದು. ನಮಗೂ ನೈತಿಕತೆ ಇರಬೇಕಲ್ವಾ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4