ತುಮಕೂರು: ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ತುಮಕೂರು ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರು ಭಾಗವಹಿಸಿ, ಸಹಕಾರ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ಅವರು, ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಸಮುದಾಯ ಸಹಕಾರದ ಮೂಲಕವೇ ಶಾಶ್ವತ ಅಭಿವೃದ್ಧಿ ಸಾಧ್ಯವೆಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಟಿ.ಕೆ.ಧನಿಯಾ ಕುಮಾರ್, ಗೌರವಾಧ್ಯಕ್ಷ ಟಿ.ಎನ್. ಮಧುಕರ್, ಮಾಜಿ ಶಾಸಕ ಗಂಗಹನುಮಯ್ಯ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಪ್ರಜಾಪ್ರಗತಿ ಸಂಪಾದಕ ಎಸ್. ನಾಗಣ್ಣ ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಪುರಸ್ಕೃತರ ಸಾಧನೆಗಳನ್ನು ಸ್ಮರಿಸಿ, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ಸಹಕಾರ ಚಟುವಟಿಕೆಗಳಿಗೆ ನೀಡಿದ ಸಹಕಾರ ಮತ್ತು ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸ್ಥಳೀಯ ಮುಖಂಡರು, ಅಭಿಮಾನಿಗಳು, ಮತ್ತು ಹಲವಾರು ಗಣ್ಯರು ಈ ಸಂದರ್ಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296