ಬೀದರ್/ ಔರಾದ: ತಾಲೂಕಿನ ಸಂತಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಕರ ಫೆಡರೇಷನ್ ನ ತಾಲೂಕು ಅಧ್ಯಕ್ಷ ರಾಜಕುಮಾರ ಶೆಂಬೆಳ್ಳಿ ಅವರನ್ನುಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಮಲ್ಲಮ್ಮ, ಶಿಕ್ಷಕಿ ಗೀತಾ, ಶಿಕ್ಷಕರಾದ ಬಾಬುರಾವ್ ಹಾಗೂ ಬಸವರಾಜ್ ಉಪಸ್ಥಿತರಿದ್ದರು. ಅಲ್ಲದೆ ಮುಖಂಡರಾದ ಎಸೆಪ್ಪ ಸೇಂಬೆಳ್ಳಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬಿಸಿಯೂಟ ಯೋಜನೆಯ ಯಶಸ್ಸಿನಲ್ಲಿ ತಯಾರಕರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


