ಹೈದ್ರಾಬಾದ್: ಸಂಕ್ರಾಂತಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕೊಬ್ಬಿದ ಹೋರಿಗಳನ್ನು ಹಿಡಿಯಲು ಹೋದ 30 ಮಂದಿಗೆ ಗಾಯಗಳಾಗಿರುವ ಘಟನೆ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.
ಪಶುವಲ ಪಂಡಾಗದಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೆಲ್ಲೂರು, ಕಡಪ, ಚಿತ್ತೂರು ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಿಂದಲೂ ಸ್ಪರ್ಧಾಳುಗಳು ಪಾಲ್ಗೊಂಡು ಕೊಬ್ಬಿದ ಹೋರಿಗಳನ್ನು ಬೆದರಿಸುವ ಹಾಗೂ ಹಿಡಿಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ತೆಲುಗುದೇಶಂನ ಮುಖ್ಯಸ್ಥ ಚಂದ್ರಬಾಬುನಾಯ್ಡು ಅವರು ಕೂಡ ಕೊಪ್ಪಂ ವಿಧಾನಸಭಾ ಕ್ಷೇತ್ರದ ಗುಂಡುಪಾಳ್ಯ ಮಂಡಲ್‍ನಲ್ಲಿ ಕೂಡ ಜಲ್ಲಿಕಟ್ಟು ಕಾರ್ಯಕ್ರಮವನ್ನು ಆಯೋಜಿಸಿದ್ದರು.ಇತ್ತೀಚೆಗೆ ತಮಿಳುನಾಡಿನ ಮಧುರೈನ ಅವನಿಪುರಂನಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡು ಒಬ್ಬರು ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy