ಬೆಳಗಾವಿ: ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಭಾನುವಾರ ಸಂಭವಿಸಿದ ಲಾರಿ ಮತ್ತು ಕಾರಿನ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಪುಣೆ ಮೂಲದ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಮತ್ತು 4 ವರ್ಷದ ಬಾಲಕ ದೇವಾಂಶ ಶ್ರೀಕಾಂತ ಮಾಂಡ್ರಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶ್ರೀಕಾಂತ ಮಾಂಡ್ರಿ (36), ವಂದನಾ (53) ಹಾಗೂ ಹರ್ಷ (25) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಸವದತ್ತಿಗೆ ತೆರಳುತ್ತಿದ್ದ ಕಾರು ಮತ್ತು ಹಾವೇರಿಯಿಂದ ಗೋಕಾಕಿಗೆ ಹತ್ತಿಕಾಳು ಸಾಗಿಸುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅತಿಯಾದ ವೇಗ ಹಾಗೂ ಅವಸರವೇ ಈ ದುರಂತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ, ಮೆಕ್ಕೆಜೋಳ ತುಂಬಿದ್ದ ಮತ್ತೊಂದು ಭಾರಿ ಲಾರಿಯ ಚಾಲಕ ತುರ್ತಾಗಿ ಬ್ರೇಕ್ ಹಾಕಿದ ಪರಿಣಾಮ ವಾಹನ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು, ಸುಮಾರು ಎರಡು ಗಂಟೆಗಳ ಕಾಲ ಸಂಚಾರ ವ್ಯತ್ಯಯ ಉಂಟಾಯಿತು.
ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
