nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ RTO ಕಚೇರಿಗಳ ಸ್ಥಾಪನೆ ಇಲ್ಲ : ಸಚಿವ ಶ್ರೀರಾಮುಲು
    ರಾಜ್ಯ ಸುದ್ದಿ December 22, 2022

    ಹೊಸ RTO ಕಚೇರಿಗಳ ಸ್ಥಾಪನೆ ಇಲ್ಲ : ಸಚಿವ ಶ್ರೀರಾಮುಲು

    By adminDecember 22, 2022No Comments2 Mins Read
    sri ramulu

    ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬಹುತೇಕ ಕಡೆಗಳಲ್ಲಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ.ಸುಮಾರು 30 ಸೇವೆಗಳನ್ನು ಆನ್‍ಲೈನ್ ಮೂಲಕವೇ ಒದಗಿಸಲಾಗುತ್ತಿದೆ.

    ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕ ರಹಿತವಾಗಿ ಸೇವೆಗಳನ್ನು ಪಡೆಯುವ ಸೌಲಭ್ಯಗಳಿರುವುದರಿಂದ ರಾಜ್ಯದಲ್ಲಿ ಹೊಸದಾಗಿ ಪ್ರಾದೇಶಿಕ ಸಾರಿಗೆ (ಆರ್‍ಟಿಓ)ಕಚೇರಿಗಳನ್ನು ಸ್ಥಾಪಿಸುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.


    Provided by
    Provided by

    ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಬೈಂದೂರು ಶಾಸಕ ಸುಕುಮಾರಶೆಟ್ಟಿ ಬಿ.ಎಂ.ಅವರ ಪ್ರಶ್ನೆಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು.ಉಡುಪಿ ಜಿಲ್ಲೆಯ ಕುಂದಾಪುರ , ಬೈಂದೂರು ತಾಲೂಕುಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಕುಂದಾಪುರದಲ್ಲಿ ಪ್ರತಿ ಮಂಗಳವಾರ ಸಾರಿಗೆ ಶಿಬಿರ ನಡೆಯುತ್ತಿದೆ.ರಾಜ್ಯದ ಇತರೆಡೆಗಳಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ನಿಯಮಿತವಾಗಿ ಸಾರಿಗೆ ಶಿಬಿರಗಳು ನಡೆಯುತ್ತಿವೆ.

    ಕುಂದಾಪುರದಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಬೇಕೆಂಬ ಪ್ರಸ್ತಾವ ಸರ್ಕಾರದ ಗಮನಕ್ಕೆ ಬಂದಿದ್ದು,ಅಲ್ಲಿ ಕಚೇರಿ ಸ್ಥಾಪನೆಗೆ ಮಾನದಂಡಗಳು ಪೂರೈಕೆಯಾಗಿಲ್ಲ ಎಂಬ ಎಂದು ಉಡುಪಿ ಆರ್‍ಟಿಓ ವರದಿ ಸಲ್ಲಿಸಿದ್ದಾರೆ.

    ಹೊಸ ಆರ್‍ಟಿಓ ಅಥವಾ ಎಆರ್‍ಟಿಓ ಕಚೇರಿಗಳನ್ನು ತೆರೆಯಲು ನಿಗದಿಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಅಪರ ಸಾರಿಗೆ ಆಯುಕ್ತರು ಹಾಗೂ ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯು, ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ,ಸುಮಾರು 30 ಸೇವೆಗಳನ್ನು ಆನ್‍ಲೈನ್ ಸೇವೆಗಳನ್ನಾಗಿ ಮಾರ್ಪಡಿಸಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕರಹಿತವಾಗಿ ಸೇವೆಗಳನ್ನು ಪಡೆಯಲು ಅವಕಾಶಗಳಿರುವದರಿಂದ ಹೊಸ ಆರ್‍ಟಿಓ ಕಚೇರಿಗಳ ಸ್ಥಾಪನೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬ ಅಭಿಪ್ರಾಯ ನೀಡಿದೆ.

    ಸಾರ್ವಜನಿಕರಿಗೆ ವಾಹನ ಅನುಜ್ಞಾ ಪತ್ರ,ವಾಹನ ನೋಂದನಣೀಯ ಸ್ಮಾರ್ಟ್ ಕಾರ್ಡ್‍ಗಳನ್ನು ಅವರ ಮನೆಯ ವಿಳಾಸಗಳಿಗೆ ಅಂಚೆ ಮೂಲಕ ತಲುಪಿಸಲಾಗುತ್ತಿದೆ.ವಾಹನ-4,ಸಾರಥಿ-4 ಮತ್ತು ಇ-ಪೇಮೆಂಟ್ ಆಫ್ ಟ್ಯಾಕ್ಸ್‍ನಂತಹ ಆನ್‍ಲೈನ್ ಸೇವೆಗಳನ್ನು ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಜಾರಿಗೊಳಿಸಲಾಗಿದೆ.

    ಕರ್ನಾಟಕ -1,ಬೆಂಗಳೂರು -1 ಮತ್ತು ಮೊಬೈಲ್-1 ಆ್ಯಪ್‍ಗಳ ಮೂಲಕವೂ ವಾಹನಗಳ ಮಾಹಿತಿ,ವಿವರಗಳನ್ನು ಪಡೆಯಬಹುದಾಗಿದೆ.ಇ-ಆಡಳಿತ ಇಲಾಖೆಯ ಗ್ರಾಮ ಒನ್ ಮತ್ತು ಜನಸೇವಕ ಯೋಜನೆಗಳಡಿಯೂ ಸಾರಿಗೆ ಇಲಾಖೆಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಯಾವುದೇ ಹೊಸ ಕಚೇರಿಗಳನ್ನು ಪ್ರಾರಂಭಿಸುವ ಅವಶ್ಯಕತೆ ಉದ್ಭವಿಸುವುದಿಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸದನದಲ್ಲಿ ವಿವರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.