ತುಮಕೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಹೊಸ ವರ್ಷ ಪ್ರಯುಕ್ತ ದೇವಸ್ಥಾನಗಳಲ್ಲಿ ಭಕ್ತರ ದಂಡು ಕಂಡು ಬಂತು.
ತುಮಕೂರು ತಾಲೂಕಿನ ಹನುಮಂತಪುರ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಆಂಜನೇಯಸ್ವಾಮಿಗೆ ವಿಳ್ಯದೇಲೆ ಅಲಂಕಾರ ಮಾಡಿ, ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು.
ಹೊಸ ವರ್ಷಾಚರಣೆ ಎಂದರೆ, ಕೇಕ್ ಇದ್ದೆ ಇರುತ್ತೆ ಹಾಗಾಗಿ ಈ ಬಾರಿ ಭಕ್ತರಿಗೆ ಹೊಸ ವರ್ಷದ ಪ್ರಯುಕ್ತ ಪ್ರಸಾದ ರೂಪದಲ್ಲಿ ಮೊಟ್ಟೆ ರಹಿತ ಕೇಕ್ ನ್ನು ದೇವಸ್ಥಾನದ ಆಡಳಿತ ಮಂಡಳಿ ವಿತರಿಸಿದ್ದು, ವಿಶೇಷವಾಗಿತ್ತು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy