ಮೈಸೂರು, ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಭಾಗಗಳಲ್ಲಿಯೂ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಹೊಸ ವರ್ಷಕ್ಕೆ ಸ್ವಾಗತ ಕೋರಲಾಯಿತು.
ಇನ್ನು ಇಂದು ಬೆಳಗ್ಗೆಯಿಂದಲೇ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ನೂರಾರು ವಾಹನಗಳು ಬೆಟ್ಟಕ್ಕೆ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಆಗಿದೆ. ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಸರದಿಯಲ್ಲಿ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಮಹಾನಗರಗಳಲ್ಲಿ ಲಕ್ಷಾಂತರ ಜನರು ಕುಣಿದು-ಕುಪ್ಪಳಿಸುವ ಮೂಲಕ ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


