ಹೊಸ ಕನಸು… ಹೊಸ ಹುರುಪು… ಹೊಸ ಭರವಸೆ… ಹೊಸ ಗುರಿ… ಹೊಸ ಸಾಹಸ… ಹೀಗೆ ಹೊಸತನವನ್ನು ಹೊತ್ತು ತರುವ ಹೊಸ ವರ್ಷ ಮತ್ತೆ ಬಂದಿದೆ.
ಇದು 2021ಕ್ಕೆ ವಿದಾಯ ಹೇಳಿ 2022ನೇ ಇಸವಿಯನ್ನು ಹರುಷದಿಂದ ಸ್ವಾಗತಿಸುವ ಕ್ಷಣ.
ಕಳೆದ ವರ್ಷದ ಸುಂದರ ನೆನಪುಗಳನ್ನು ಮೆಲುಕು ಹಾಕುತ್ತಾ, ಜೀವನದ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಹೊಸ ಕನಸುಗಳೊಂದಿಗೆ ಸುಂದರ ಭವಿಷ್ಯದತ್ತ ಹೆಜ್ಜೆ ಇಡುವ ಕ್ಷಣ ಇದಾಗಿದೆ.
ಹೊಸ ವರ್ಷ ಬರೀ ಕ್ಯಾಲೆಂಡರ್ ಬದಲಾಯಿಸುವ ಕ್ಷಣ ಮಾತ್ರ ಅಲ್ಲ. ನಮ್ಮ ಬದುಕಿನ ಹೊಸ ಹೆಜ್ಜೆಯತ್ತ ಸಾಗುವ ಹೊತ್ತು ಕೂಡಾ ಹೌದು. ಮತ್ತೆ ನಮಗೆ ಅದೇ 365 ದಿನಗಳು ಸಿಗುತ್ತವೆ.
ಈ ದಿನಗಳನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಭವಿಷ್ಯ ಇನ್ನಷ್ಟು ಉಜ್ವಲವಾಗುತ್ತದೆ. ಜತೆಗೆ, ಕಳೆದ ವರ್ಷದತ್ತ ಒಮ್ಮೆ ಹಿಂತಿರುಗಿ ನೋಡಿ ಅವಲೋಕನ ಮಾಡಿಕೊಳ್ಳುವುದು ಕೂಡಾ ಮುಖ್ಯ.
ಈ ಸಿಂಹಾವಲೋಕನ ಕಳೆದ ವರ್ಷದ ನಮ್ಮ ತಪ್ಪುಗಳನ್ನು ಅರಿತುಕೊಳ್ಳಲು, ಆದ ತಪ್ಪನ್ನು ತಿದ್ದಿಕೊಳ್ಳಲು ಅಥವಾ ನಾವು ಭವಿಷ್ಯದಲ್ಲಿ ಇಡಬೇಕಾದ ಹೆಜ್ಜೆಗೆ ದಾರಿಯನ್ನು ತೋರಿಸುವ ಅವಕಾಶದಂತಿರುತ್ತದೆ.
ಈ ವರ್ಷ ನಿಮ್ಮ ಬೆಂಬಲ ಮತ್ತು ಪ್ರೀತಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನಮ್ಮ ಈ ಸುಂದರ ಸ್ನೇಹಕ್ಕೆ ಇನ್ನೂ ಹಲವು ವರ್ಷಗಳಿವೆ. 2022 ರ ಇದು ಮೊದಲನೆಯ ಮೆಟ್ಟಿಲು.
ಹೊಸ ವರ್ಷದ ಪ್ರತಿಕ್ಷಣವೂ ಸಂತಸದಿಂದ ಕೂಡಿರಲಿ. ನಿಮ್ಮ ಬದುಕಿನ ಹೊಸ ವರ್ಷವೆಂಬ ಪುಟದ ಹಾಳೆಗಳಲ್ಲಿ ಬರೀ ಖುಷಿಯ ಕ್ಷಣಗಳಷ್ಟೇ ತುಂಬಿರಲಿ. ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು…
ಮುರುಳಿಧರನ್ ಆರ್. ಹಿರಿಯೂರು
( ಟಿ ವಿ ನ್ಯೂಸ್ ಮಾಧ್ಯಮ )
ಪತ್ರಕರ್ತರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy