ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ.
ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದು, ಹೋಟೆಲ್ ನೊಳಗಿದ್ದ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ.
ಅಡುಗೆ ಕೋಣೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿ ಫೋನ್ ಮೂಲಕ ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡು ಬಂಧನದಿಂದ ಹೊರಬಂದಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಹೊಟೇಲ್ ನ ಸಂಪೂರ್ಣ ಭಾಗ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


