ರಾಯಚೂರು: ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ವ್ಯಾನ್ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆಯಿತು.
ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವ್ಯಾನ್ ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ಕೆಲವು ಜನರು ನೀರು ಹಾಕಿ ನಂದಿಸಲು ಯತ್ನಿಸಿದ್ದಾರೆ.
ರೈಲ್ವೆ ನಿಲ್ದಾಣದೊಳಗಿನಿಂದ ಮರಳು ಹಾಗೂ ಬೆಂಕಿನಂದಿಸುವ ಉಪಕರಣ ತಂದು ಹಾಕಲಾಗಿತ್ತು. ಆದರೂ ಇದ್ದಕ್ಕಿದ್ದಂತೆ ಬೆಂಕಿ ಕೆನ್ನಾಲಿಗೆ ಚಾಚಿ ವ್ಯಾನ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ವಾಹನವು ತಲುಪುವ ಮೊದಲೇ ವಾಹನ ಉರಿದುಹೋಗಿತ್ತು ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy