ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಲಾರಿಯೊಂದು ಹೊತ್ತಿ ಉರಿದ ಘಟನೆ ತುಮಕೂರು ತಾಲೂಕಿನ ಗೂಳೂರು ಬಳಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮುಂಜಾನೆ 3.3ರ ಸಮಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಮೊದಲು ಲಾರಿಗೆ ಬೆಂಕಿ ಹತ್ತಿಕೊಂಡ ವೇಳೆ ಬೆಂಕಿ ನಂದಿಸಲಾಗಿತ್ತು. ಆದರೆ, 6 ಗಂಟೆಯ ವೇಳೆ ಮತ್ತೆ ಏಕಾಏಕಿ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ಲಾರಿ ಹೊತ್ತಿ ಉರಿದಿದೆ.
ಬೆಂಕಿಗಾಹುತಿಯಾದ ಲಾರಿ ಎಳೆ ನೀರು ಸಾಗಿಸುವ ಲಾರಿಯಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ. ದುರ್ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೃಹತ್ ಬೆಂಕಿಯನ್ನು ಕಂಡು ಸಾರ್ವಜನಿಕರು ತೀವ್ರ ಆತಂಕಗೊಂಡಿದ್ದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz