ಶಿರಾ: ತಾಲೂಕಿನ ಬಂದಕುಂಟೆ ಗೊಲ್ಲರಹಟ್ಟಿಯಲ್ಲಿ ಗುರುವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ಎಲ್ಲ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬಂದಕುಂಟೆ ಗೊಲ್ಲರಹಟ್ಟಿಯ ಮೂಡ್ಲಪ್ಪ ಅವರ ಮನೆಗೆ ಬೆಂಕಿ ಬಿದ್ದಿದ್ದು, ಕುರಿ ಮಾರಾಟ ಮಾಡಿ ಸಂಪಾದಿಸಿದ್ದ 3 ಲಕ್ಷ ರೂಪಾಯಿ, ಧಾನ್ಯ, ಚಿನ್ನಾಭರಣ, ಬಟ್ಟೆ ಸೇರಿದಂತೆ ಎಲ್ಲವೂ ಸುಟ್ಟು ಕರಕಲಾಗಿದೆ.
ಘಟನೆ ನಡೆದ ವೇಳೆ ಕುಟುಂಬಸ್ಥರು ದೇವಸ್ಥಾನಕ್ಕೆ ತೆರಳಿದ್ದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಭಸ್ಮವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


