ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ(50) ಮೃತರಾಗಿದ್ದಾರೆ.
ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಅವರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಈ ಕುರಿತು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


