nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರಕವಿ ದ.ರಾ.ಬೇಂದ್ರೆಯವರ ಬಗ್ಗೆ ನಿಮಗೆಷ್ಟು ಗೊತ್ತು?
    ಸ್ಪೆಷಲ್ ನ್ಯೂಸ್ January 31, 2023

    ವರಕವಿ ದ.ರಾ.ಬೇಂದ್ರೆಯವರ ಬಗ್ಗೆ ನಿಮಗೆಷ್ಟು ಗೊತ್ತು?

    By adminJanuary 31, 2023No Comments1 Min Read
    dara bendre

    ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ(ದ.ರಾ.ಬೇಂದ್ರೆ) ಅವರು  1896ನೇ ಇಸವಿಯ ಜನವರಿ 31ರಂದು ಜನಿಸಿದರು. ಅವರ ಜನ್ಮ ದಿನಾಚರಣೆಯಾದ ಈ ದಿನ ಅವರ ಕುರಿತು ಕೆಲವೊಂದು ವಿಚಾರಗಳನ್ನು ತಿಳಿದುಕೊಳ್ಳೋಣ…

    ದ.ರಾ.ಬೇಂದ್ರೆ ಅವರು ರಾಮಚಂದ್ರ ಭಟ್ಟ, ಅಂಬಿಕೆ ದಂಪತಿಯ ಪುತ್ರರಾಗಿದ್ದಾರೆ. 1973ರಲ್ಲಿ ಬೇಂದ್ರೆಯವರ ಕವನ ಸಂಕಲನವಾದ ‘ನಾಕುತಂತಿ’ಗಾಗಿ ಅವರು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದುಕೊಂಡರು. ಇದಲ್ಲದೇ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ.


    Provided by
    Provided by

    ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದ ಅವರ ಮೊದಲ ಸಾಹಿತ್ಯ ರಚನೆ ‘ಒಲವು’. 1918ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು.

    ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ.  1921ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

    ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

    ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.

    ಇವರು ಬರೆದ “ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ” ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ. ಇವರನ್ನು ಕನ್ನಡದ “ಕನ್ನಡದ ಠಾಗೋರ್” ಎಂದೂ ಕರೆಯಲಾಗುತ್ತದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.