ತುಮಕೂರು: ಕೆಸರಿನಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಹೊಯ್ಸಳ ಗಸ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಿಸಿರುವ ಘಟನೆ ನಗರದ ದೇವರಾಯಪಟ್ಟಣ ಸಮೀಪ ನಡೆದಿದ್ದು, ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ತುಮಕೂರು ನಗರದ ದೇವರಾಯಪಟ್ಟಣ ಸಮೀಪ ಕಳೆದ ನಾಲ್ಕು ಐದು ದಿನಗಳಿಂದ ವ್ಯಾಪಕ ಮಳೆಯಾಗಿದ್ದರಿಂದ ಅಲ್ಲಿನ ಕೆರೆ ಕೋಡಿಯಲ್ಲಿ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬ ಸಂಕಷ್ಟದಲ್ಲಿ ಸಿಲುಕಿದ್ದ.
ವ್ಯಕ್ತಿಯು ಕುಡಿತದ ಮತ್ತಿನಲ್ಲಿದ್ದ ಎನ್ನಲಾಗಿದ್ದು, ಈ ವಿಚಾರ ತಿಳಿದ ತಕ್ಷಣವೇ ಹೊಯ್ಸಳ ಗಸ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ರಕ್ಷಣೆ ಮಾಡಿದೆ.
ಪೊಲೀಸ್ ಸಿಬ್ಬಂದಿಗಳಾದ ಮಹೇಶ ಹಾಗೂ ಬಸವರಾಜ್ ಸ್ಥಳಕ್ಕೆ ತೆರಳಿ, ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳೀಯರ ನೆರವಿನೊಂದಿಗೆ ಪತ್ತೆ ಹಚ್ಚಿ, ಬಳಿಕ ವ್ಯಕ್ತಿಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA