ಶಿವಮೊಗ್ಗ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ವಿದ್ಯಾರ್ಥಿಯಾಗಿದ್ದಾನೆ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಜಯಂತ್ ಮೃತಪಟ್ಟಿದ್ದ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


