ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದ ಮೊದಲ ವಿಧಿವಿಜ್ಞಾನ ವಿವಿ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಂಜೂರಾತಿ ನೀಡಿದೆ.
ಎರಡ್ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ವಿವರವಾಗಿ ಪತ್ರ ಬರೆದು ವಿವಿ ಕ್ಯಾಂಪಸ್ ಸ್ಥಾಪನೆಗೆ ಮನವರಿಕೆ ಮಾಡಲಾಗಿತ್ತು. ಇದರ ಪರಿಣಾಮ ಹುಬ್ಬಳ್ಳಿ-ಧಾರವಾಡಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


