ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ 19 ವರ್ಷದ ಮಾನ್ಯ ಪಾಟೀಲ ಎಂಬಾಕೆಯನ್ನು ಆಕೆಯ ತಂದೆ ವೀರನಗೌಡ ಪಾಟೀಲ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಕೊಲೆಯಾದ ಮಾನ್ಯ ಏಳು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದರು. ಮಗಳ ಅಂತರ್ಜಾತಿ ವಿವಾಹದಿಂದ ಆಕ್ರೋಶಗೊಂಡಿದ್ದ ತಂದೆ ಮತ್ತು ಸಂಬಂಧಿಕರು ಭಾನುವಾರ ಸಂಜೆ ದಂಪತಿಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಈ ವೇಳೆ ಪತ್ನಿಯ ರಕ್ಷಣೆಗೆ ಬಂದ ಪತಿ ವಿವೇಕಾನಂದ ಹಾಗೂ ಆತನ ಪೋಷಕರ ಮೇಲೂ ಹಲ್ಲೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾನ್ಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವೀರನಗೌಡ ಸೇರಿದಂತೆ ಮೂವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


