ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಜನದಟ್ಟಣೆಯ ಭವಿಷ್ಯ ದೃಷ್ಟಿಯಿಂದ ಇಟ್ಟುಕೊಂಡು ಕೇಂದ್ರ ಸರ್ಕಾರ ಹೊಸ ಟರ್ಮಿನಲ್ ಸ್ಥಾಪನೆಗೆ ಅನುಮೋದನೆ ನೀಡಿತ್ತು. ಕಟ್ಟಡ ನಿರ್ಮಾಣದ ಕಾಮಗಾರಿ ಕೆಲಸ ಬರದಿಂದ ಸಾಗಿದೆ. ಇದು ಈ ಏರ್ ಪೋರ್ಟ್‌ಗೆ ಅಂತಾರಾಷ್ಟ್ರೀಯ ಮೆರಗು ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿಯ ಪ್ರಗತಿ ವೀಕ್ಷಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆಗೆ ಪರಿಶೀಲನಾ ಸಭೆ ನಡೆಸಿ ಬಳಿಕ ಯೋಜನೆ ವಿವರ ಕೊಟ್ಟರು.
ಹುಬ್ಬಳ್ಳಿಯಲ್ಲಿ ಸದ್ಯ ವಾರ್ಷಿಕ 50,000 ಜನರ ನಿರ್ವಹಣೆಗೆ ಆಗುವಷ್ಟು ವಿಶಾಲವಾಗಿ ಟರ್ಮಿನಲ್ ಇದೆ. ಭವಿಷ್ಯ ದೃಷ್ಟಿಯಿಂದ ಈ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಹುಬ್ಬಳ್ಳಿ ನಿರ್ಮಿಸಲಾಗುತ್ತಿದೆ. ನಿಲ್ದಾಣಕ್ಕೆ ಅಗತ್ಯವಾದ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಮೇಲ್ದರ್ಜೆ ಸೌಲಭ್ಯ ನೀಡಲಿದ್ದೇವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಪಥ ವೇಗ ಪಡೆಯಲಿದೆ ಎಂದು ಅವರು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296