ಪಾಕಿಸ್ತಾನದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ಪತ್ತೆಯಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಜಿ ಗಣಿಗಾರಿಕೆ ಸಚಿವ ಇಬ್ರಾಹಿಂ ಹಜಲ್ ಮುರಾದ್ ಅವರು, ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಸುಮಾರು 800 ಬಿಲಿಯನ್ ಪಾಕಿಸ್ತಾನಿ ರೂಪಾಯಿ(80 ಸಾವಿರ ಕೋಟಿ) ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಟ್ಟಾಕ್ ನಿಂದ ತರ್ಬೆಲಾ ಮತ್ತು ಮಿಯಾನ್ ಕಣಿವೆವರೆಗಿನ 32 ಕಿ.ಮೀ. ಪ್ರದೇಶದಲ್ಲಿ ಈ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಪಾಕಿಸ್ತಾನದ ಭೂವೈಜ್ಞಾನಿಕ ಸಮೀಕ್ಷಾ ಇಲಾಖೆ ನಡೆಸಿದ ಸಂಶೋಧನೆಯಲ್ಲಿ ಚಿನ್ನದ ನಿಕ್ಷೇಪ ಇರುವುದು ದೃಢಪಟ್ಟಿದೆ. ಈ ಚಿನ್ನದ ನಿಕ್ಷೇಪ ಪಾಕಿಸ್ತಾನದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಬಳಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx