ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ, ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


