nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    ಕೊರಟಗೆರೆ December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    By adminDecember 10, 2025No Comments2 Mins Read
    koratagere

    ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ  ಡಾ.ಜಿ.ಪರಮೇಶ್ವರ ರವರ  ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ  ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ‍್ಯಾಲಿ ಪಟ್ಟಣದಲ್ಲಿ ನಡೆಸಿದರು.

    ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗುತ್ತಿದ್ದಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ.ಪರಮೇಶ್ವರ ರವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್‌ ಸ್ಟ್ಯಾಂಡ್ ವೃತ್ತದವರೆಗೆ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.

    ಯುವಕರು ಬೈಕ್ ರ‍್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರರೇ ಆಗಬೇಕು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆದ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೂಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ ನಾಯಕ ಎಂಬುವ ಕಾರಣಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೊರಗಿಡಲಾಗಿದೆ, ಇದು ಸಂವಿಧಾನಕ್ಕೆ ಮಾಡಿರುವ ಮೋಸವಾಗಿದ್ದು ಡಾ.ಜಿ.ಪರಮೇಶ್ವರ ರವರನ್ನು ಕೂಡಲೆ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ವಿವಿಧ ಮಠಾಧೀಶರುಗಳು ಆಗ್ರಹಿಸಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಣೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ ದಲಿತರು ಮುಖ್ಯಮಂತ್ರಿಯಾಗಿಲ್ಲ ಡಾ.ಜಿ.ಪರಮೇಶ್ವರ ರವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದಾರೆ, ಅವರ ಸೇವಾಮನೂಭಾವ, ಸಜ್ಜನಿಕೆ, ಉತ್ತಮ ರಾಜಕಾರಣಿ ಎನ್ನುವ ಅಭಿಪ್ರಾಯದೊಂದಿಗೆ ದೆಹಲಿಯ ವರೀಷ್ಠರು ಅವರನ್ನು ದಲಿತ ಮುಖ್ಯಮಂತ್ರಿ ಎನ್ನುವ ನ್ಯಾಯದೊಂದಿಗೆ ಇವರನ್ನು ಪರಿಗಣಿಸಬೇಕು, ತುಮಕೂರು ಜಿಲ್ಲೆಯ ಪ್ರಬಲ ನಾಯಕರಾದ ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿಯಾದರೆ ತುಮಕೂರು ಜಿಲ್ಲೆಗೂ ಸಹ ಆದ್ಯತೆ ನೀಡಿದಂತಾಗುತ್ತದೆ ಅವರ ಮೇಲೆ ಪ್ರೀತಿ ಇರುವ, ಆಶೀರ್ವಾದ ಇರುವ, ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆ ಇರುವ ಹಲವು ಸ್ವಾಮೀಜಿಗಳು ಅವರ ಪರ ಬೆಂಬಲವಾಗಿ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಇದನ್ನು ರಾಜ್ಯ ಸರ್ಕಾರ ಮತ್ತು ದೆಹಲಿಯ ವರಿಷ್ಠರು ಗಂಭೀರವಾಗಿ ಪರಿಗಣಿಸಿ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಆಟವಿ ಮಠದ ಶಿವಲಿಂಗ ಮಹಾ ಸ್ವಾಮೀಜಿ, ಆದಿ ಜಾಂಬವ ಮಠದ ಷಡಕ್ಷರಿ ಮಹಾ ಮುನಿ ಸ್ವಾಮೀಜಿ, ಬಸವ ಮಹಾಲಿಂಗ ಸ್ವಾಮೀಜಿ, ನವಗ್ರಹ ಲಕ್ಷ್ಮೀಶ್ವರಿ ಮಠದ ನಾಗೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮಂಜುಳಾ,  ಕವಿತಾ, ವೆಂಕಟೇಶ್, ಕೆಪಿಸಿಸಿ ಸದಸ್ಯರುಗಳಾದ ಪ್ರಸನ್ನಕುಮಾರ್, ಎ.ಡಿ.ಬಲರಾಮಯ್ಯ, ರಜಾಕ್‌ಸಾಬ್, ಮಹಾಲಿಂಗಪ್ಪ, ಬೂಚನಹಳ್ಳಿ ಬಿ.ಎಸ್.ದಿನೇಶ್, ಓಬಳರಾಜು, ಕೆ.ವಿ.ಮಂಜುನಾಥ್, ಗಣೇಶ್, ಕೆಂಪಣ್ಣ, ವಿನಯ್‌ ಕುಮಾರ್, ಗೊಂದಿಹಳ್ಳಿ ರಂಗರಾಜು, ಭೈರೇಶ್, ಕಾರ್ ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ಮನೆಗೆ ಹೊಸದಾಗಿ ಬಣ್ಣ ಬಳಿಯುವುದು, ಅದರಲ್ಲೂ ವಿಶೇಷವಾಗಿ ಮರು ಪೇಂಟಿಂಗ್ ಮಾಡಿಸುವುದು ಹಲವರಿಗೆ ದೊಡ್ಡ ತಲೆನೋವಿನ ಕೆಲಸ. ಪೇಂಟಿಂಗ್ ಮುಗಿದ…

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.