ತುಮಕೂರು: ಅಪರೇಷನ್ ಸಿಂಧೂರದಲ್ಲಿ ದೇಶದ ಸೈನಿಕರ ಆತ್ಮಸ್ಟೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ತಿರಂಗ ಯಾತ್ರೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ, ರಾಜ್ಯಸಭೆ ಸದಸ್ಯ ಜಗ್ಗೇಶ್, ವಿವಿಧ ಮಠಗಳ ಸ್ವಾಮೀಜಿ ಗಳು ಹಾಜರಿದ್ದರು. ಬೃಹತ್ ರಾಷ್ಟ ಧ್ವಜವನ್ನು ಹಿಡಿದುಕೊಂಡು ವಿದ್ಯಾರ್ಥಿಗಳು ಸಾರ್ವಜನಿಕರು ಸಾಗಿದರು.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ದೇಶದ ಸಾರ್ವಜನಿಕರನ್ನು ಮುಟ್ಟಿದರೆ ಯಾವ ರೀತಿ ಉತ್ತರವನ್ನು ಕೊಡುತ್ತೇವೆ ಎಂಬುದನ್ನು ದೇಶದ ಸೈನಿಕರು ದಿಟ್ಟ ಉತ್ತರವನ್ನು ನೀಡಿದ್ದಾರೆ. ಪ್ರಪಂಚಕ್ಕೆ ಈ ರೀತಿಯಾದ ಒಂದು ಸಂದೇಶವನ್ನು ನೀಡಿದ್ದಾರೆ ಎಂದರು.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಿರಂಗ ಯಾತ್ರೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.
27 ಅಮಾಯಕ ಸಾರ್ವಜನಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳಿಗೆ ಹಾಗೂ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯವರು ನೂರಾರು ಉಗ್ರಗಾಮಿಗಳನ್ನು ಕೊಂದು ಹಾಕುವ ಮೂಲಕ ಉತ್ತರವನ್ನು ನೀಡಿದ್ದಾರೆ ಎಂದು ಹೇಳಿದರು.
ಇದನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳದಿದ್ದರೆ ಭಾರತ ಯಾವುದಕ್ಕೂ ಕಡಿಮೆ ಇಲ್ಲ ಎಂಬುದನ್ನು ಮತ್ತೊಮ್ಮೆ ತೋರಿಸಬೇಕಾಗುತ್ತದೆ. ಪ್ರಧಾನಿ ಮೋದಿ ಅವರ ದೇಶದ ಅಭಿವೃದ್ಧಿಯ ಸಂಕಲ್ಪಕ್ಕೆ ಪೂರಕವಾಗಿ ಸೈನಿಕರು ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ತುಮಕೂರಿನಲ್ಲಿ ಒಂದು ರೀತಿಯ ಹಬ್ಬದ ವಾತಾವರಣದೊಂದಿಗೆ ತಿರಂಗ ಯಾತ್ರೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW