nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಾದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ‘ಹುಲಿಬೇಟೆ’
    ಸ್ಪೆಷಲ್ ನ್ಯೂಸ್ January 4, 2023

    ರಾಜ್ಯಾದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ‘ಹುಲಿಬೇಟೆ’

    By adminJanuary 4, 2023No Comments2 Mins Read
    hulibete

    ಕೊರಟಗೆರೆ: ‘ಹುಲಿಬೇಟೆ’ ಚಿತ್ರವು ಇದೇ  ಶುಭ ಶುಕ್ರವಾರದಂದು ರಾಜ್ಯಾದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು  ಚಿತ್ರತಂಡವು ಹೇಳಿದೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರತಂಡ, ಕೊರೊನ ಎಂಬ ಮಹಾಮಾರಿಯಿಂದ ಹುಲಿ ಬೇಟೆ ಚಿತ್ರೀಕರಣ ಅರ್ಧಕ್ಕೆ ನಿಲ್ಲಿಸಲಾಗಿತ್ತು.  ಇದೀಗ  ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದ್ದು,  ಇದೇ  ಶುಭ ಶುಕ್ರವಾರದಂದು ರಾಜ್ಯದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.

    ಸ್ಥಳೀಯ ಪ್ರತಿಭೆಗಳು ನಿರ್ಮಿಸಿ ನಟಿಸಿರುವ ಈ ಚಿತ್ರವನ್ನು  ಚಿತ್ರಮಂದಿರದಲ್ಲೇ ನೋಡಿ ಸ್ಥಳೀಯ ಪ್ರತಿಭೆಗಳನ್ನು ಅರಸಿ ಆಶೀರ್ವದಿಸಿ  ಎಂದು  ಚಿತ್ರತಂಡದ ಕಲಾವಿದರು  ಕೇಳಿಕೊಂಡರು.

    ಹುಲಿಬೇಟೆ ಚಿತ್ರದ ನಾಯಕ  ವಿಶ್ವನಾಥ್ ಚೌಹಾಣ್  ಮಾತನಾಡಿ, ಹುಲಿ ಬೇಟೆ ಚಿತ್ರವು ರಾಯರ ಸನ್ನಿಧಾನದಲ್ಲಿ ಮುಹೂರ್ತವನ್ನು ಮುಗಿಸಿ ಕೊರಟಗೆರೆ ಸೇರಿದಂತೆ  ರಾಜ್ಯದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಿದ್ದು, ಹುಲಿ ಬೇಟೆ ಚಿತ್ರವು ತುಂಬಾ ಅದ್ಭುತವಾಗಿ ಮೂಡಿ ಬಂದಿದ್ದು, ಈ ಚಿತ್ರವು  ಸಂಪೂರ್ಣ ಸಂಸಾರಿಕ ಹಾಗೂ ಪ್ರೀತಿ ವಾತ್ಸಲ್ಯದ  ಚಿತ್ರವಾಗಿದ್ದು ಚಿತ್ರ ನೋಡುವ ವೀಕ್ಷಕರಿಗೆ ಸಂಪೂರ್ಣ ಇಷ್ಟವಾಗುತ್ತದೆ ಎಲ್ಲರೂ ಚಿತ್ರಮಂದಿರದಲ್ಲಿ ಚಿತ್ರವನ್ನು ನೋಡಿ ಸ್ಥಳೀಯ ಪ್ರತಿಭೆಗಳನ್ನ ಅರಸಿ ಆಶೀರ್ವದಿಸಿ ಎಂದು ಕೇಳಿಕೊಂಡರು

    ಹುಲಿಬೇಟೆ ಚಿತ್ರದ ಸಂಪೂರ್ಣ  ಚಿತ್ರೀಕರಣ ಮಾಡಿದ ಛಾಯಾಗ್ರಾಹಕ ಧನಪಾಲ್ ರಾಜ್ ಮಾತನಾಡಿ, ಈ ಚಿತ್ರವು ಕರ್ನಾಟಕದ ವಿವಿಧ ಪ್ರಕೃತಿಯ  ಸೊಬಗಿನ ಸುಂದರ  ತಾಣಗಳಲ್ಲಿ  ಚಿತ್ರೀಕರಣ ಮಾಡಿದ್ದು, ಸುಂದರವಾಗಿ ಮೂಡಿ ಬಂದಿದೆ ಇದೆಲ್ಲದಕ್ಕೂ ಮಿಗಿಲಾದದ್ದು ಚಲನಚಿತ್ರ ನಟ ಮಾಸ್ಟರ್ ಆನಂದ್ ರವರು 11 ದಿನಗಳ ಕಾಲ ಯಾವುದೇ ಸಂಭಾವನೆ ತೆಗೆದುಕೊಳ್ಳದೆ ಕನ್ನಡದ ಪ್ರತಿಭೆಗಳು ಬೆಳೆಯಬೇಕು ಎನ್ನುವ ಉದ್ದೇಶದಿಂದ ಉಚಿತವಾಗಿ ಒಂದು  ಅದ್ಭುತವಾದ ಪಾತ್ರದಲ್ಲಿ ಅಭಿನಯಿಸಿದ್ದಾರೆ.

    ಇನ್ನು   ಈ ಚಿತ್ರದಲ್ಲಿ ಅಭಿನಯಿಸಿರುವ ಪ್ರತಿಭೆಗಳು  ಸಂಪೂರ್ಣ ಹೊಸಬರ ತಂಡ ವಾಗಿದ್ದು ಈ ಒಂದು  ಪ್ರತಿಭೆಗಳ ತಂಡವು ಬೆಳೆಯಬೇಕು ಅದರ ಜೊತೆಗೆ ಹುಲಿ ಬೇಟೆ ಚಿತ್ರವು  ಯಶಸ್ವಿಯಾಗಬೇಕು ಆದ್ದರಿಂದ ಕರುನಾಡಿನ  ಕನ್ನಡ ಚಿತ್ರದ ಪ್ರೇಮಿಗಳು ಆರಾಧಕರು ಈ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ ಅರಸಿ ಆಶೀರ್ವದಿಸಿ ಎಂದು ಕೇಳಿಕೊಂಡರು.

    ಇನ್ನು ಕೊರಟಗೆರೆ ಸ್ಥಳೀಯ ಪ್ರತಿಭೆ ಹೈಯತ್ ಖಾನ್ ಮಾತನಾಡಿ, ಅನೇಕ ವರ್ಷಗಳಿಂದಲೂ ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿಕೊಂಡು ಬಂದಿದ್ದೇನೆ.  ಇದೀಗ ಹುಲಿ ಬೇಟೆ ಎನ್ನುವ  ಚಲನಚಿತ್ರದಲ್ಲಿ ಪೋಷಕ ಪಾತ್ರದಲ್ಲಿ  ಅಭಿನಯಿಸುವ  ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ.  ಹುಲಿ ಬೇಟೆ ಚಿತ್ರವು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ನಿಮ್ಮ ತಾಲೂಕಿನ ಪ್ರತಿಭೆಗಳು  ರಾಜ್ಯ ಮಟ್ಟದಲ್ಲಿ ಹೆಸರು ಮಾಡಲು ಹೊರಟಿದ್ದೇವೆ  ಹುಲಿ ಬೇಟೆ ಚಿತ್ರವನ್ನು ತಾವೆಲ್ಲರೂ ಚಿತ್ರಮಂದಿರದಲ್ಲಿ ಬಂದು ನೋಡಿ ಪ್ರೋತ್ಸಾಹಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

    ಇನ್ನು ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತ ನಿರ್ದೇಶಕ ರಾಜ್ ಬಹದ್ದೂರ್,  ಕನ್ನಡ ಚಿತ್ರರಂಗದಲ್ಲಿ ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಈ ಚಿತ್ರವು ನಮ್ಮ ಕರುನಾಡಿನ  ವಿಶೇಷ ಸ್ಥಳಗಳಾದ  ಯಾದಗಿರಿ,. ಶಹಪುರ್, ರಾಯಚೂರು, ಬೆಂಗಳೂರು, ತುಮಕೂರು ಸೇರಿದಂತೆ ಕೊರಟಗೆರೆಯ ಸುಪ್ರಸಿದ್ಧ ಕ್ಷೇತ್ರಗಳಾದ  ಗೊರವನಹಳ್ಳಿ, ಸಿದ್ದರಬೆಟ್ಟ,  ನವಿಲುಕುರಿಕೆ ಸೇರಿದಂತೆ ಅನೇಕ ಪ್ರವಾಸಿಗರತನದಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ. ಹುಲಿ ಬೇಟೆ ಚಿತ್ರ ತಂಡದ  ನಾಯಕ ನಟ  ವಿಶ್ವನಾಥ್ ಚೌಹಾಣ್, ನಿರ್ದೇಶಕ ನಿರ್ಮಾಪಕ ರಾಜ್ ಬಹದ್ದೂರ್, ಧನಪಾಲ್ ರಾಜ್, ಪೋಷಕ ಪಾತ್ರದಲ್ಲಿ ಅಭಿನಯಿಸುತ್ತಿರುವ ಆಯತ್ ಖಾನ್  ಸೇರಿದಂತೆ ಅನೇಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.