ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಹುಳಿಯಾರ್ ರಸ್ತೆಯಲ್ಲಿನ ವಿದ್ಯುತ್ ಕಂಬಗಳ ದೀಪಗಳು ಕಾರ್ಯನಿರ್ವಹಿಸದೆ ಸುಮಾರು ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದೆ ಎಂದು ತಾಲ್ಲೂಕಿನ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಹಿರಿಯೂರು ನಗರದಿಂದ ಮೈಸೂರುಗೆ ತೆರಳುವ ಈ ರಸ್ತೆಯು ಪ್ರಧಾನ ರಸ್ತೆಯಾಗಿದ್ದು , ಈ ಮಾರ್ಗದಲ್ಲಿ ಹಿರಿಯೂರು ನಗರದ ಪ್ರಖ್ಯಾತ ಖಾಸಗಿ ಆಸ್ಪತ್ರೆಯಾದ ಗುರುಮೂರ್ತಿ ಹಾಸ್ಪಿಟಲ್ ಹಾಗೂ ಪುಷ್ಪಾಂಜಲಿ ಚಿತ್ರಮಂದಿರವಿದೆ. ಆದರೆ, ಈ ರಸ್ತೆಯಲ್ಲಿರುವ ಬೀದಿ ದೀಪಗಳು ಸುಮಾರು ಏಳೆಂಟು ತಿಂಗಳುಗಳಿಂದ ಕಾರ್ಯನಿರ್ವಹಿಸದಿದ್ದರೂ ಸಂಬಂಧ ಪಟ್ಟವರು ಇನ್ನೂ ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ.
ಘಟನೆಯ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಾಗಲಿ ಸ್ಥಳೀಯ ಶಾಸಕರಾಗಲಿ ಈವರೆಗೆ ಗಮನ ಹರಿಸಿಲ್ಲ. ಈ ಪ್ರದೇಶದಲ್ಲಿ ಕತ್ತಲು ಆವರಿಸಿದ್ದರಿಂದಾಗಿ ಇದು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ. ರಾತ್ರಿಯಾದರೆ, ಈ ದಾರಿಯಲ್ಲಿ ಸಂಚರಿಸಲು ಮಹಿಳೆಯರು ಹೆದರುವಂತಾಗಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy