ತುರುವೇಕೆರೆ: ತಾಲೂಕಿನ ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಇದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಬಿ.ಶಿವಕುಮಾರ ಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಶಿಧರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
16 ಸಂಖ್ಯಾಬಲ ಸದಸ್ಯವುಳ್ಳ ಪಂಚಾಯಿತಿ ಇದಾಗಿದ್ದು, ಯಾರೊಬ್ಬರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿರುವ ತಾಲೂಕು ದಂಡಾಧಿಕಾರಿಯಯಾದ ವೈ.ಎಂ.ರೇಣು ಕುಮಾರ್ ಅವರು, ಚುನಾವಣಾ ಪ್ರಕ್ರಿಯೆಯನ್ನು ಮುಗಿಸಿ ಶಶಿಧರ್ ಅವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ್ ಇದೇ ವೇಳೆ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಯಾವುದೇ ತರಹದ ನೀರಿನ ಸಮಸ್ಯೆ, ಆಗಲಿ ಚರಂಡಿ ಸಮಸ್ಯೆ ಆಗಲಿ, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಈ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಮಾಜಿ ಅಧ್ಯಕ್ಷ ಕಿರಣ್ ರಾಮಡಿಹಳ್ಳಿ, ಎಲ್ಲಾ ಸದಸ್ಯರುಗಳು, ಚುನಾವಣಾ ಸಿಬ್ಬಂದಿ ಕಾಂತರಾಜು, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಸವೇಶ್ ಹುಲ್ಲೆಕೆರೆ, ರಕ್ಷಿತ್ ಮಾಚೇನಹಳ್ಳಿ, ಗೌರೀಶ್ ಹಟ್ಟಿಹಳ್ಳಿ, ರಾಜು ಸಾಸಲು, ರಾಜೇಶ್ ಮಾಚೇನಹಳ್ಳಿ, ಮೇಲೆಗೌಡ, ಇನ್ನು ಹಲವು ಮುಖಂಡರು ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy