nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳು ಹಿಡಿದ ಕಳಪೆ ಆಹಾರ ವಸ್ತುಗಳಿಂದ ಮಕ್ಕಳಿಗೆ ಬಿಸಿಯೂಟ: ಶಿಕ್ಷಣ ಸಚಿವರ ತವರಿನಲ್ಲೇ ಅಮಾನವೀಯ ಘಟನೆ
    ಗುಬ್ಬಿ January 11, 2022

    ಹುಳು ಹಿಡಿದ ಕಳಪೆ ಆಹಾರ ವಸ್ತುಗಳಿಂದ ಮಕ್ಕಳಿಗೆ ಬಿಸಿಯೂಟ: ಶಿಕ್ಷಣ ಸಚಿವರ ತವರಿನಲ್ಲೇ ಅಮಾನವೀಯ ಘಟನೆ

    By adminJanuary 11, 2022No Comments2 Mins Read

    ಗುಬ್ಬಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಕ್ಷೇತ್ರ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟದ ಆಹಾರ ಸಾಮಗ್ರಿಗಳು ಸಿಗುತ್ತಿಲ್ಲ. ಸದ್ಯ ಹುಳು ಹಿಡಿದಿರುವ ಆಹಾರ ಸಾಮಗ್ರಿಗಳನ್ನು ಸರ್ಕಾರ ಪೂರೈಸುತ್ತಿದ್ದು,  ಈ ಹುಳು ಹಿಡಿದ ಆಹಾರ ವಸ್ತುಗಳನ್ನೇ ಬಳಸಿ ಆಹಾರ ತಯಾರಿಸುವ ಅನಿವಾರ್ಯ ಸ್ಥಿತಿ ಶಾಲಾ ಅಡುಗೆ ಸಿಬ್ಬಂದಿಯದ್ದಾಗಿದೆ.

    ಗುಬ್ಬಿ ತಾಲ್ಲೂಕಿನ ಲ್ಲಿ ಒಟ್ಟು 441 ಸರ್ಕಾರಿ ಶಾಲೆಗಳಿದ್ದು, ಪ್ರತಿ ತಿಂಗಳು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ 750 ಕೆ.ಜಿ.ಅಕ್ಕಿ ಸರಬರಾಜು ಆಗುತ್ತಿದೆ.  130 ಕ್ವಿಂಟಾಲ್ ಗೋದಿ  ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ  ತಲಾ 100 ಗ್ರಾಂ ನಷ್ಟು ಲೆಕ್ಕದಲ್ಲಿ 5 ತಿಂಗಳ ಬಾಕಿ ಸೇರಿ 730 ಕ್ವಿಂಟಾಲ್ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಗುಬ್ಬಿ ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಯೋಗಾನಂದ್ ತಿಳಿಸಿದರು.


    Provided by
    Provided by

    ಪ್ರತಿ ಶಾಲೆಯಲ್ಲಿ ಆಹಾರ ತಯಾರಿಸಲು ಅಡುಗೆಯವರು ಹಾಗೂ ಸಹಾಯಕರು ಕೆಲಸ ಮಾಡುತ್ತಿದ್ದು ಕಳೆದ 6 ತಿಂಗಳಿಂದ ಇವರಿಗೆ ಮಾಸಿಕ ವೇತನ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಆಹಾರ ತಯಾರಿಸುವ ವಿಧಾನದಿಂದ ಆಹಾರ ಸಾಮಾಗ್ರಿಗಳನ್ನು ಶುದ್ಧೀಕರಣ ಮಾಡುವ ಜವಾಬ್ದಾರಿ ಇವರಿಗೆ ನೀಡಲಾಗಿದೆ. ಆದರೆ ಅಕ್ಷರ ದಾಸೋಹ ಯೋಜನೆಯಡಿ ವಿತರಣೆ ಮಾಡುವ ಪಡಿತರದಲ್ಲಿ ಕಸ , ಕಡ್ಡಿ ಮತ್ತು ಹುಳುಗಳು ಇರುವುದರಿಂದ ಆಹಾರ ಸಾಮಗ್ರಿಗಳನ್ನು ಶುದ್ಧ ಮಾಡಲು ಹರಸಾಹಸ ಪಡುವಂತಾಗಿದೆ.

    ಇನ್ನೂ ಆಹಾರ ವಿತರಣೆಯ ಗುತ್ತಿಗೆ ಪಡೆದುಕೊಂಡಿರುವವರು ಆಹಾರ ಪದಾರ್ಥಗಳ ವಿತರಣೆಯ ಸಂದರ್ಭದಲ್ಲಿ ಪರಿಶೀಲನೆ ನಡೆಸದೇ ಹುಳ ಹಿಡಿದ, ಕಸಕಡ್ಡಿ ಮಿಶ್ರಿತ  ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಗುಬ್ಬಿ ಜಿ.ಹೊಸಹಳ್ಳಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮುಖ್ಯ ಅಡುಗೆ ತಯಾರಾಕರಾದ  ಕೃಷ್ಣಮ್ಮ ಮಾತನಾಡಿ, ಸರ್ಕಾರ ಸರಬರಾಜು ಮಾಡುತ್ತಿರುವ ಆಹಾರ ಪದಾರ್ಥಗಳು ಅಡುಗೆಗೆ ಬಳಸಲು ಯೋಗ್ಯ ವಾದದ್ದಲ್ಲ, ಆದರೂ ಸಹ ವಿಧಿ ಇಲ್ಲದೇ ಬರುವ ಆಹಾರದಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ ಸಮೀಪದ ಶಾಲೆಗಳಾದ ಲಕ್ಕೇನಹಳ್ಳಿ, ಅಮಾನಿಕೆರೆ, ಬಂಗ್ಲೋಪಾಳ್ಯ ಶಾಲೆಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು ಈ ಶಾಲೆಗಳಲ್ಲಿ ಹಿಂದುಳಿದ ವರ್ಗದ , ಕೂಲಿ ಕಾರ್ಮಿಕರು, ಪರಿಶಿಷ್ಟ ಸಮುದಾಯದ  ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ  ವಿದ್ಯಾರ್ಥಿಗಳು ಶಾಲೆಯ ಬರುತ್ತಿದ್ದು,  ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶಿಕ್ಷಣ ಇಲಾಖೆ ಆಟವಾಡುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

    ಅಕ್ಷರ ದಾಸೋಹ ಪಡಿತರ ಸರಬರಾಜಿನಲ್ಲಿಯೂ ನಡೆಯುತ್ತಿರುವ ಅಕ್ರಮವನ್ನು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತಕ್ಷಣವೇ ತಡೆಯಬೇಕು. ಈ ರೀತಿಯ ಕಳಪೆ ಆಹಾರ ಪೂರೈಕೆ ಮಾಡುವ ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಪಡಿಸಬೇಕು. ಮಕ್ಕಳಿಗೆ ಪ್ರಾಣಿಗಳು ಕೂಡ ತಿನ್ನಲು ಯೋಗ್ಯವಲ್ಲದ ಆಹಾರವನ್ನು ಪೂರೈಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ತಕ್ಷಣವೇ ಈ ಸಂಬಂಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲವಾದರೆ, ಸರ್ಕಾರ ಮತ್ತು  ಶಿಕ್ಷಣ ಇಲಾಖೆ ಹಾಗೂ ಗುತ್ತಿಗೆದಾರರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಪರಿಗಣಿಸಿ  ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ  ಎಂಬ ಆಕ್ರೋಶದ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬಂದಿದೆ.

    ವರದಿ.ಡಿ.ಮಂಜುನಾಥ್. ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.