ತುಮಕೂರು: ವಿಶ್ವ ಪರಿಸರ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಂದ ಸೆಪ್ಟೆಂಬರ್ 30ರಂದು ಬೆಳಿಗ್ಗೆ 8 ಗಂಟೆಗೆ ನಗರದ ಮಹಾನಗರಪಾಲಿಕೆ ಆವರಣ(ಟೌನ್‌ಹಾಲ್)ದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q